ಸಿಎಂ ಕುರ್ಚಿ ಬದಲಾವಣೆ ಪಕ್ಕಾ? ಸಿದ್ದರಾಮಯ್ಯ ಸುಳಿವು!

NS CREATION FF
0

ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆ ಶುರುವಾಗಿದೆ.
ಬಜೆಟ್ ಬಳಿಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಆಗುತ್ತದೆಯಾ?
ಸಿಎಂ ಕುರ್ಚಿ ಬದಲಾವಣೆ ಪಕ್ಕಾ ಎನ್ನುವ ಪ್ರಶ್ನೆಗಳು ಇದೀಗ ರಾಜಕೀಯ ವಲಯದಲ್ಲಿ ತೀವ್ರವಾಗಿ ಕೇಳಿಬರುತ್ತಿವೆ.

ಈ ಎಲ್ಲಾ ಚರ್ಚೆಗೆ ಕಾರಣವಾಗಿದ್ದು ಮುಖ್ಯಮಂತ್ರಿ Siddaramaiah ನೀಡಿದ ಕುತೂಹಲಕಾರಿ ಪತ್ರಿಕಾ ಪ್ರಕಟಣೆ.




ಸಿಎಂ ಹೇಳಿಕೆಯಲ್ಲಿ ಏನು ವಿಶೇಷ?

ವಿಪಕ್ಷ ನಾಯಕರಿಗೆ ಟಾಂಗ್ ಕೊಡಲು ಹೊರಡಿಸಿದ ಪ್ರಕಟಣೆಯಲ್ಲಿ ಸಿಎಂ ಅವರು ಹೀಗೆ ಹೇಳಿದ್ದಾರೆ:

“ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯೇ ಇರುತ್ತಾರೆ. ಈ ಅವಧಿಯನ್ನು ಕಾಂಗ್ರೆಸ್ ಪಕ್ಷವೇ ಪೂರ್ಣಗೊಳಿಸುತ್ತದೆ.”

ಇಲ್ಲಿ ಗಮನಿಸಬೇಕಾದ ವಿಚಾರ ಏನಂದ್ರೆ —
ಸಿಎಂ ಅವರು “ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ” ಎಂದು ಎಲ್ಲಿಯೂ ಉಲ್ಲೇಖ ಮಾಡಿಲ್ಲ.

ಇದರಿಂದಲೇ ರಾಜಕೀಯ ವಲಯದಲ್ಲಿ ನಾಯಕತ್ವ ಬದಲಾವಣೆಯ ಕುರಿತ ಊಹಾಪೋಹಗಳು ಜೋರಾಗಿದೆ.


ಡಿಕೆ ಶಿವಕುಮಾರ್ ಜೊತೆಗಿನ ಸಂಬಂಧದ ಬಗ್ಗೆ ಸ್ಪಷ್ಟನೆ

ಸಿಎಂ ಅವರು ಮತ್ತೊಂದು ಪ್ರಮುಖ ವಿಷಯಕ್ಕೂ ಪ್ರತಿಕ್ರಿಯಿಸಿದ್ದಾರೆ.
ವಿರೋಧ ಪಕ್ಷದ ನಾಯಕರು ತಮ್ಮ ಮತ್ತು D. K. Shivakumar ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

“ನಮ್ಮ ಹಾಲು-ಜೇನಿನಂತಹ ಸಂಬಂಧಕ್ಕೆ ಯಾವುದೇ ಪರಿಣಾಮವಾಗುವುದಿಲ್ಲ” ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.


ಫೋನ್ ಟ್ಯಾಪಿಂಗ್ ಆರೋಪಕ್ಕೆ ತಿರುಗೇಟು

ಫೋನ್ ಟ್ಯಾಪಿಂಗ್ ಆರೋಪಗಳ ಕುರಿತಾಗಿ ಮಾತನಾಡಿದ ಸಿಎಂ,
ಆರೋಪ ಮಾಡಿರುವವರು ಹಿಂದೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಆಗಿದ್ದವರು. ಅವರ ಕಾಲದಲ್ಲಿಯೂ ಗುಪ್ತಚರ ವಿಭಾಗ ಮುಖ್ಯಮಂತ್ರಿಗಳ ಬಳಿಯೇ ಇತ್ತು ಎಂದು ಹೇಳಿದ್ದಾರೆ.

ಈ ಹೇಳಿಕೆಗಳು ವಿರೋಧ ಪಕ್ಷಗಳಿಗೆ ನೇರ ಸಂದೇಶ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.


ನಾಯಕತ್ವ ಬದಲಾವಣೆ ನಿಜವಾಗುತ್ತದೆಯಾ?

ಸದ್ಯಕ್ಕೆ ಕಾಂಗ್ರೆಸ್ ಪಕ್ಷದ ಪರವಾಗಿ ಸ್ಪಷ್ಟ ಸಂದೇಶ ಏನೆಂದರೆ —
👉 “ಐದು ವರ್ಷ ಆಡಳಿತ ಕಾಂಗ್ರೆಸ್ ಪಕ್ಷದ್ದೇ.”

ಆದರೆ ಮುಂದಿನ ದಿನಗಳಲ್ಲಿ ರಾಜಕೀಯ ಬೆಳವಣಿಗೆಗಳು ಹೇಗೆ ತಿರುಗುತ್ತವೆ ಎಂಬುದು ಗಮನಿಸಬೇಕಿದೆ.



ಬಜೆಟ್ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ರಣರೋಚಕ ಬೆಳವಣಿಗೆಗಳು ನಡೆಯುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಜೋರಾಗಿದೆ.


Post a Comment

0Comments

Post a Comment (0)
To Top